ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರ ಸಾವು
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸಮೀಪದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗದ ಚಾಲನೆಯೇ ಈ ದುರ್ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.