ಮಂಡ್ಯದಲ್ಲಿ ಗಣೇಶ ಹಬ್ಬ: ಶಾಂತಿಯುತ ಆಚರಣೆಗೆ ಡಿಸಿ ಕರೆ, ಅಕ್ರಮ ಚಟುವಟಿಕೆಗಳಿಗೆ ಕಠಿಣ ಎಚ್ಚರಿಕೆ
ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮುಂಬರುವ ಗಣೇಶ ಚತುರ್ಥಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.