ಕಾವೇರಿ ನೀರು ಬಿಡುಗಡೆ: ಕರ್ನಾಟಕದ ಮನವಿ ಸೆ. 14 ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ನೀಡಿದ್ದ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಸೆಪ್ಟೆಂಬರ್ 14 ರಂದು ನಡೆಯಲಿದೆ. ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಈ ವಿಚಾರಣೆ ಮಹತ್ವ ಪಡೆದುಕೊಂಡಿದೆ.