ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಸಕಲ ಸಿದ್ಧತೆ: 1,200 ಪೊಲೀಸರು, 140 ಬಸ್ಗಳ ನಿಯೋಜನೆ
ಮಂಡ್ಯ ಜಿಲ್ಲೆಯ ಪ್ರಸಿದ್ಧ ಮೇಲುಕೋಟೆಯಲ್ಲಿ ಶನಿವಾರ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವಕ್ಕೆ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ 1,200 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ, ಭಕ್ತರ ಅನುಕೂಲಕ್ಕಾಗಿ 140 ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
