ಕರ್ನಾಟಕ ಉಪಚುನಾವಣೆ: ಎನ್‌ಡಿಎಗೆ ಐದು, ಕಾಂಗ್ರೆಸ್‌ಗೆ ಎರಡು ಸ್ಥಾನಗಳ ಜಯ
ರಾಜ್ಯದಲ್ಲಿ ನಡೆದ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಐದು ಸ್ಥಾನಗಳನ್ನು ಗೆದ್ದುಕೊಂಡಿದೆ. ಇನ್ನುಳಿದ ಎರಡು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ವಿಜಯ ಸಾಧಿಸುವ ಮೂಲಕ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ.