ನಂಜನಗೂಡು ನಗರದ ಶ್ರೀ ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾದ ಹಸಿರು ಕ್ರಾಂತಿಯ ಹರಿಕಾರರು, ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ.
ಡಾ.ಬಾಬು ಜಗಜೀವನ್ ರಾಮ್ ಅವರು ಶೋಷಿತರ, ದಮನಿತರ ಧ್ವನಿಯಾಗಿ ಹೋರಾಟ ನಡೆಸಿದ ಮಹಾನ್ ವ್ಯಕ್ತಿ. ಅಸ್ಪೃಶ್ಯತೆ ವಿರುದ್ಧ ಹೋರಾಡಿ ಸಮಾಜದಲ್ಲಿ ಸಮಾನತೆ ಮೂಡಿಸಲು ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. ಹಸಿರು ಕ್ರಾಂತಿಯ ಮೂಲಕ ದೇಶದ ಆಹಾರ ಉತ್ಪಾದನೆಯನ್ನು ಹೆಚ್ಚಿಸಿ, ಬಡವರ ಹಸಿವು ತಣಿಸುವಲ್ಲಿ ಅವರು ಮಹತ್ವದ ಪಾತ್ರವಹಿಸಿದ್ದಾರೆ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಜನಸೇವೆಯ ಮನೋಭಾವ ನಮ್ಮೆಲ್ಲರಿಗೂ ಆದರ್ಶವಾಗಿದೆ.
ಈ ಸಂದರ್ಭದಲ್ಲಿ MLC ತಿಮ್ಮಯ್ಯ ರವರು, ಮಾಜಿ ಶಾಸಕರಾದ ಕೇಶವಮೂರ್ತಿ ರವರು, ತಹಸೀಲ್ದಾರ್ ಸ್ಮಿತಾ ರಾಮ್ ರವರು, ನಗರ ಬ್ಲಾಕ್ ಅಧ್ಯಕ್ಷರಾದ ಸಿ. ಎಂ ಶಂಕರ್ ರವರು, ಮಾಜಿ ನಗರಸಭಾ ಅಧ್ಯಕ್ಷರಾದ ಶ್ರೀಕಂಠಸ್ವಾಮಿ ರವರು, ಸಮಾಜದ ಮುಖಂಡರಾದ ಸ್ವಾಮಿ ರವರು, ದೇವರಾಜ್ ರವರು, ಪ್ರಕಾಶ್ ರವರು, ಚಂದ್ರು ರವರು, ಶ್ರೀನಿವಾಸ್ ರವರು , ಕುಮಾರ್ ರವರು, ಪುಟ್ಟಸ್ವಾಮಿ ರವರು, ಮುರುಗೇಶ್ ರವರು, ಅರೂರಪ್ಪ ರವರು, ಉಪ್ಪಿನಹಳ್ಳಿ ಶಿವಣ್ಣ ರವರು, ಸ್ವಾಮಿ.ಎಸ್ ರವರು ಸೇರಿದಂತೆ ಹಲವು ಮುಖಂಡರು, ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವಿವಿಧ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.
#BabuJagajeevanRam

